ಉಡುಪಿ: ವೈದ್ಯನೊಬ್ಬ ತನ್ನ ಸಹಪಾಠಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು, ಈ ಸಂಬಂಧ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಕಿರುಕುಳ ನೀಡಿದ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ.
ಹೊರರಾಜ್ಯದವರಾದ ಇವರು ಆರಂಭದಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗ ಡ್ಯಾನಿಷ್, ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದ ಎನ್ನಲಾಗಿದೆ. ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಕ್ಯಾಂಪಸ್ ನಲ್ಲಿ ಪರಿಚಯವಾಗಿತ್ತು. ನಂತರ 2024 ರ ಜನವರಿ 22 ರಂದು ಮಾತುಕತೆ ವೇಳೆ ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಗಿ ಆರೋಪಿಸಲಾಗಿದೆ. ರೂಮ್ ನಲ್ಲಿ ಆರೋಪಿಯು ತನ್ನ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದಿದ್ದ. ದೇಹದ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕತೆಗೆ ಬೇಡಿಕೆ ಇಟ್ಟಿದ್ದ. 2024ರ ಆಗಸ್ಟ್ 28 ರವರೆಗೂ ಪೋನ್‌ನಲ್ಲಿ ತನ್ನನ್ನು ಸಂಪರ್ಕಿಸಿ ನಿರಂತರ ಕಿರುಕುಳ ಎಂದು ನೀಡಿದ್ದ ಎಂದು ವೈದ್ಯ ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಪ್ರಕರಣದ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್ ( 27)ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.