ಉಡುಪಿ, ಫೆಬ್ರವರಿ 14: ಅಜ್ಜರಕಾಡು ಜಿಲ್ಲಾಸ್ಪತ್ರೆಯ ಒಳರೋಗಿಯಾಗಿ ದಾಖಲಾಗಿದ್ದ ಶಿವಕುಮಾರ್ (35) ಎಂಬ ವ್ಯಕ್ತಿಯು 2023ರ ಡಿಸೆಂಬರ್ 11 ರಂದು ಆಸ್ಪತ್ರೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.
168 ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.












