ಉಡುಪಿ: ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ಉದ್ಯಾವರ ನಿವಾಸಿ ರಂಗನಾಥ ಕಾಮತ್ (49) ಎಂಬ ವ್ಯಕ್ತಿಯು ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
168 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ, ಇಂಗ್ಲೀಷ್ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.