ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ಪಿ. ವೈದೇಹಿ ನಯನ್‍ತಾರ ಇವರು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಮಣಿಪಾಲ್ ಇನ್ಸಿಟಿಟ್ಯೂಟ್ ಆಫ್ ಇನ್‍ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿಯಾದ ಡಾ. ಸುರೇಖಾ ಕಾಮತ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಕಂಪ್ಯೂಟರ್ ಯೈಡೆಡ್ ಡಯಾಗ್ನಾಸಿಸ್ ಸಿಸ್ಟಮ್ ಫಾರ್ ಡಿಟೆಕ್ಸ್‍ನ್ ಆ್ಯಂಡ್ ಕ್ಲಾಸಿಫಿಕೇಶನ್ ಆಫ್ ಲಿವರ್ ಟ್ಯೂಮರ್ ಯೂಸಿಂಗ್ ಕಂಪ್ಯೂಟೆಡ್ ಟೊಮೋಗ್ರಫಿ ಇಮೇಜ್” ಎಂಬ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಪ್ರಾಧ್ಯಾಪಕಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.












