ಉಡುಪಿ: ಸುನಾಗ್ ಆಸ್ಪತ್ರೆಯ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ.

ಉಡುಪಿ: ಸುನಾಗ್ ಆಸ್ಪತ್ರೆಯ ವತಿಯಿಂದ 78ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ವೈದ್ಯಾಧಿಕಾರಿ ಹಾಗೂ ನಿರ್ದೇಶಕರಾದ ಡಾ.ನರೇಂದ್ರ ಕುಮಾರ್ ಹೆಚ್. ಎಸ್ ಹಾಗೂ ಡಾ.ವೀಣಾ ನರೇಂದ್ರ ಇವರ ಅದ್ಯಕ್ಷತೆಯಲ್ಲಿ ನೆರವೇರಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಆಸ್ಪತ್ರೆಯ ಲೆಕ್ಕ ಪರಿಶೋಧಕರಾದ ಶ್ರೀಮತಿ ಕವಿತಾ ಎಂ.ಪೈ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.

ಸುನಾಗ್ ಆಸ್ಪತ್ರೆಯ ತನ್ನ 6 ವರ್ಷಗಳ ಸಾರ್ವಜನಿಕ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದ ಸಂದರ್ಭದಲ್ಲಿ ವೈದ್ಯಾಧಿಕಾರಿಯಾದ ಡಾ.ನರೇಂದ್ರ ಕುಮಾರ್ ಹೆಚ್.ಎಸ್ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ ಹಿತವಚನವನ್ನು ನೀಡಿದರು.

ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ. ವೀಣಾರವರು ವಂದನಾರ್ಪಣೆಯನ್ನು ಸಲ್ಲಿಸಿದರು. ಆಸ್ಪತ್ರೆಯ ವ್ಯವಸ್ಥಾಪಕಿಯಾದ ಶ್ರೀಮತಿ ಶೋಭ ಯು.ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.