ಉಡುಪಿ: ಹೊಲಿಗೆ ಹಾಗೂ ವಿಡಿಯೋಗ್ರಾಫೀ ತರಬೇತಿ – ಅರ್ಜಿ ಆಹ್ವಾನ

ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ
ಜಾತಿ ಉಪ ಯೋಜನೆಯಡಿ ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ 18 ರಿಂದ 40 ವರ್ಷದೊಳಗಿನ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಅನುತ್ತೀರ್ಣವಾದ ಪರಿಶಿಷ್ಟ ಜಾತಿಯ ಯುವಕ ಹಾಗೂ ಯುವತಿಯರಿಗೆ ನವೆಂಬರ್ 7 ರಿಂದ 26 ರ ವರೆಗೆ ಒಟ್ಟು 20 ದಿನಗಳ ಹೊಲಿಗೆ ತರಬೇತಿ ಶಿಬಿರ ಹಾಗೂ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಅನುತ್ತೀರ್ಣವಾದ ಪರಿಶಿಷ್ಟ ಜಾತಿಯ ಮಹಿಳಾ ಅಭ್ಯರ್ಥಿಗಳಿಗೆ ನವೆಂಬರ್ 15 ರಿಂದ 26 ರ ವರೆಗೆ
ಒಟ್ಟು 12 ದಿನಗಳ ವಿಡಿಯೋಗ್ರಾಫೀ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿ ಶಿಬಿರಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.

ಅರ್ಜಿ ಸಲ್ಲಿಸಲು ನವೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ:9480886467 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.