ಉತ್ತರ ಕನ್ನಡ ಜಿಲ್ಲಾಧ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜುಲೈ.16ರಂದು ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಶಾಲಾ-ಕಾಲೇಜು, ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರೀಯಾ ಆದೇಶ ಹೊರಡಿಸಿದ್ದಾರೆ.












