ಉಡುಪಿ: ಸಂಡೂರು, ಶಿಗ್ಗಾಂವಿ, ಚೆನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿದೆ. ಚನ್ನಪಟ್ಟಣದ ಅಭ್ಯರ್ಥಿ ಯಾರಾಗಬೇಕೆಂದನ್ನು ನಾಳೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡ್ತಾರೆ. ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿ ಬಗ್ಗೆ ರಾತ್ರಿ ಚರ್ಚಿಸಿ, ಅಂತಿಮ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸುತ್ತೇವೆ. ನಾಳೆ ಅಥವಾ ನಾಡಿದ್ದು ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಉಡುಪಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೂರು ಕ್ಷೇತ್ರದಲ್ಲೂ ಕೂಡ ಬಿಜೆಪಿ, ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕು. ಇದಕ್ಕಾಗಿ ಈಗಾಗಲೇ ಕಾರ್ಯಕರ್ತರು ಸಜ್ಜಾಗಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಂದೋಲನ, ಹೋರಾಟ ಮಾಡುತ್ತಿದ್ದೇವೆ. ಅಲ್ಲದೆ, ಅಭಿವೃದ್ಧಿ ಶೂನ್ಯ ಸರಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಮೂರು ಕ್ಷೇತ್ರದ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡ್ತಾರೆ ಎಂದರು.