ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಶ್ರೀಮನ್ಮಹಾರಥೋತ್ಸವ.

ಮಹತೋಭಾರ ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ಗುರುವಾರ ಶ್ರೀ ಮನ್ಮಹಾರಥೋತ್ಸವ ನಡೆಯಿತು .

ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ರಥಾರೋಹಣ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಅನ್ನ ಪ್ರಸಾದ ಸ್ವೀಕರಿಸಿದರು.

ಸಂಜೆ ಸ್ಯಾಕ್ಸೋಫೋನ್ ಕಛೇರಿ, ರಾತ್ರಿ ಶ್ರೀ ಮನ್ಮಹಾರಥೋತ್ಸವ, ಉತ್ಸವ ಬಲಿ, ಮಹಾರಂಗ ಪೂಜೆ, ಶ್ರೀ ಭೂತ ಬಲಿ, ಶಯನೋತ್ಸವ ನಡೆಯಿತು‌.

ಪರ್ಯಾಯ ತಂತ್ರಿ ವೇ.ಮೂ. ಬೆಟ್ಟಿಗೆ ವೆಂಕಟರಾಜ ತಂತ್ರಿಗಳ ಮಾರ್ಗದರ್ಶನದಲ್ಲಿ ಸರದಿ ಅರ್ಚಕರಾದ ವೇ.ಮೂ ಗುರುರಾಜಭಟ್ ಅರ್ಚಕತ್ವದಲ್ಲಿ, ವೇ.ಮೂ. ಶ್ರೀನಿವಾಸ ಭಟ್, ವೇ.ಮೂ ವೆಂಕಟೇಶ ಭಟ್ ಸಹಕಾರದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಎಲ್ಲೂರು ಗ್ರಾ.ಪಂ. ಅಧ್ಯಕ್ಷ ರವಿರಾಜ್ ರಾವ್, ಬೆಳಪು ಗ್ರಾ.ಪಂ. ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ದೇಗುಲದ ಕಾರ್ಯನಿರ್ವಹಣಾಧಿಕಾರಿ ರಾಜಗೋಪಾಲ ಉಪಾಧ್ಯಾಯ, ಪವಿತ್ರಪಾಣಿ ಕೆ.ಎಲ್. ಕುಂಡಂತಾಯ, ವ್ಯವಸ್ಥಾಪನ ಸಮಿತಿ ನಿಕಟಪೂರ್ವ ಅಧ್ಯಕ್ಷ ಅರುಣಾಕರ ಶೆಟ್ಟಿ ಕಳತ್ತೂರು, ಮಾಜಿ ಅಧ್ಯಕ್ಷರಾದ ವೈ. ಪ್ರಫುಲ್ಲ ಶೆಟ್ಟಿ ಎಲ್ಲೂರುಗುತ್ತು, ಜಗದೀಶ ಅರಸ ಕುತ್ಯಾರು, ಕಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೇ.ಮೂ ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಕುಂಜೂರು ಶ್ರೀ ದುರ್ಗಾದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಮನೆ ದೇವರಾಜ ರಾವ್, ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ರಾವ್ ಪಾಟೇಲ್, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ಶೇಖರ್ ಡಿ. ಶೆಟ್ಟಿ ಮಾಣಿಯೂರು ಬರ್ಪಾಣಿ, ನಿರಂಜನ್ ಶೆಟ್ಟಿ ಕಿನ್ನೋಡಿಗುತ್ತು ಜೆನ್ನಿ ನರಸಿಂಹ ಭಟ್ ಮಲಂಗೋಳಿ, ಕುತ್ಯಾರು ಪ್ರಸಾದ್ ಶೆಟ್ಟಿ ದಾನಿಗಳಾದ ಸುಧಾಕರ್ ಶೆಟ್ಟಿ ಬರೋಡ, ಅಶೋಕ್ ಎನ್. ಶೆಟ್ಟಿ ಬೈರುಗುತ್ತು ಹರಿಜೀವನ್ ಶೆಟ್ಟಿ ಕಾಪು, ಎಲ್ಲೂರು ಯುವಕ ಮಂಡಲದ ಅಧ್ಯಕ್ಷ ಸುಕೇಶ್ ಸುವರ್ಣ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರು ಹಾಗೂ ಗ್ರಾಮ ಸೀಮೆಯ ಭಗವದ್ಬಕ್ತರು ಪಾಲ್ಗೊಂಡಿದ್ದರು.