ಬ್ರಹ್ಮಾವರ:ಎಸ್ ಎಮ್ ಎಸ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜೂ.10ರಂದು ಕಾಲೇಜಿನ ವಾರ್ಷಿಕ ಸಂಚಿಕೆ “ಇನ್ಸಪಾಯಿರ್” ಬಿಡುಗಡೆ ಮಾಡಲಾಯಿತು. ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ಒ ಎಸ್ ಸಿ ವಿದ್ಯಾ ಸಂಸ್ಥೆಯ ಸಂಚಾಲಕರಾದ ರೆ.ಫಾ.ಎಮ್.ಸಿ ಮಥಾಯಿ ಅವರು ವಹಿಸಿ, ಅಧ್ಯಕ್ಷಿಯ ಭಾಷಣದಲ್ಲಿ ಈ ಸಂಚಿಕೆ ವಿದ್ಯಾರ್ಥಿಗಳ ಕ್ರಿಯಾಶೀಲತೆ ಹೆಚ್ಚಿಸುವಲ್ಲಿ ಸಹಕಾರವಾಗುತ್ತದೆ ಎಂದರು.
ಬ್ರಹ್ಮಾವರದ ಉದ್ಯಮಿ ಹಾಗೂ ಬ್ರಹ್ಮಾವರ ತಾಲ್ಲೂಕು ಅತ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷರಾದ ಶ್ರೀ ಭರತ್ ಕುಮಾರ್ ಶೆಟ್ಟಿಯವರು ಸಂಚಿಕೆಯನ್ನು ಬಿಡುಗಡೆಗೊಳಿಸಿ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ ಸರ್ವತೋಮುಖ ಅಭಿವೃದ್ಧಿ ಹೊಂದುವಂತೆ ಸೂಚಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಐವನ್ ದೋನಾತ್ ಸುವಾರಿಸ್ ಸರ್ವರನ್ನೂ ಸ್ವಾಗತಿಸಿ, ಉಪನ್ಯಾಸಕರಾದ ಸಂತೋಷ್ ನೀಲಾವರ ಕಾರ್ಯಕ್ರಮ ನಿರ್ವಹಿಸಿದರು. ರಾಘವೇಂದ್ರ ಐತಾಳ್ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ತಿತರಿದ್ದರು.