ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -3 ಯು ಜಿಲ್ಲೆಯ 5 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಿಂದ 9 ರವರೆಗೆ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.