ಕಿನ್ನಿಗೋಳಿ: ಕಂಬಳ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ವರಪಾಡಿ ‘ ಲಕ್ಕಿ’ ಎಂಬ ಕೋಣ ಬುಧವಾರ ಅನಾರೋಗ್ಯದಿಂದ ಕೊನೆಯುಸಿರೆಳೆದಿದೆ.
ಕಳೆದ ವರ್ಷದ ಕಂಬಳ ಸೀಸನ್ ನಲ್ಲಿ 5 ಮೆಡಲ್ ಗಳನ್ನು ಲಕ್ಕಿ ಗೆದ್ದುಕೊಂಡಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿ ನಡೆದ ಕಂಬಳದಲ್ಲಿ ನೇಗಿಲು ಹಿರಿಯ ವಿಭಾಗದಲ್ಲಿ ಲಕ್ಕಿ ಎರಡನೇ ಬಹುಮಾನ ಪಡೆದುಕೊಂಡಿದೆ.
ಕಕ್ಯಪದವು, ಬೆಂಗಳೂರು, ನರಿಂಗಾನ, ಐಕಳ ಮತ್ತು ಜಪ್ಪು ಕಂಬಳಗಳಲ್ಲಿ ಮೆಡಲ್ ಗೆದ್ದಿದ್ದು, ವರಪಾಡಿ ಬಡಗುಮನೆ ದಿವಾಕರ ಚೌಟ ಅವರು ಸಾಕಿದ್ದ ಕೋಣ ನಿಧನ ಹೊಂದಿರುವುದು ಹಲವು ಕಂಬಳ ಅಭಿಮಾನಿಗಳಿಗೆ ತೀವ್ರ ದುಃಖ ತಂದಿದೆ.