ಕಟಪಾಡಿ:ತ್ರಿಶಾ ಕ್ಲಾಸಸ್ : ಸಿ ಎ ಫೌಂಡೇಶನ್ ಸಾಧಕರಿಗೆ ಸನ್ಮಾನ

ಕಟಪಾಡಿ :ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ತ್ರಿಶಾ ಕ್ಲಾಸಸ್ ಉಡುಪಿಯ ವತಿಯಿಂದ ಹೆತ್ತವರ ಉಪಸ್ಥಿತಿಯಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಆಗಸ್ಟ್ 3ರಂದು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ಅವರು ಉತ್ತೀರ್ಣರಾದ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮುಂದಿನ ಅವರ ಭವಿಷ್ಯಕ್ಕೆ ಶುಭ ಹಾರೈಸಿದರು.

ಗರಿಷ್ಠ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ತ್ರಿಶಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ವಿಘ್ನೇಶ್ ಶೆಣೈ ಹಾಗೂ ಸಿದ್ಧಾಂತ್ ಫೌಂಡೇಶನ್ ಟ್ರಸ್ಟಿ ನಮಿತಾ ಜಿ ಭಟ್, ತ್ರಿಶಾ ಕ್ಲಾಸಸ್ ಬೋಧಕರಾದ ಸಿಎ ದಿವ್ಯಾ ಪ್ರಭು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸಮೀಕ್ಷಾ ನಿರೂಪಿಸಿ ವಂದಿಸಿದರು.