ಕಟಪಾಡಿ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಹೆಚ್ಚಿಸಲು “ಲಿಸನ್ ಲರ್ನ್ ಲೀಡ್” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಡುಪಿಯ ಚಿತ್ತಾರ ಕಂಫರ್ಟ್ ನಲ್ಲಿ11 ಫೆಬ್ರವರಿ 2025 ರಂದು ಆಯೋಜಿಸಲಾಯಿತು.
ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸಿಎ ಗೋಪಾಲ ಕೃಷ್ಣ ಭಟ್ ಅವರು ಆತ್ಮ ವಿಶ್ವಾಸ ಮತ್ತು ಸ್ವಯಂ ಪ್ರೇರಣೆಯ ಮಹತ್ವವನ್ನು ಒತ್ತಿ ಹೇಳಿದರು. “ಆತ್ಮವಿಶ್ವಾಸವು ಯಶಸ್ಸಿನ ಪ್ರಮುಖ ಕೀಲಿಕೈ ಎಂದರೆ ಅದರಲ್ಲಿ ಸಂಶಯವಿಲ್ಲ. ಆತ್ಮವಿಶ್ವಾಸವಿದ್ದಾಗ, ನಿಮಗೆ ಜಯದ ಅರ್ಧ ಭಾಗ ಸಿಕ್ಕಂತೆ. ನಾವು ಕೇವಲ ಫಲಿತಾಂಶಗಳಿಗಾಗಿ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವುದಿಲ್ಲ,ಬದಲಾಗಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುತ್ತೇವೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ದೃಢಸಂಕಲ್ಪ ಮತ್ತು ಧೈರ್ಯದಿಂದ ನಿಯಂತ್ರಿಸಲು ಪ್ರೇರೇಪಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದಲ್ಲಿ ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಭವೀಷ್ ಬೆಳ್ಳಾರೆ ರವರಿಗೆ ಸನ್ಮಾನಿಸಲಾಯಿತು.
ಈ ಕಾರ್ಯಗಾರದಲ್ಲಿ ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಂತ್ .ಪೈ. ಎಸ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.












