ಕಟಪಾಡಿ: ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಬಹುಮಾನ ವಿತರಣಾ ಸಮಾರಂಭವು ಡಿಸೆಂಬರ್ 27 ರಂದು ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಪ್ಲೇಸ್ಮೆಂಟ್ ಮುಖ್ಯಸ್ಥರಾದ ಡಾ. ಮಂಜುನಾಥ್ ಸಿ ಕೆ ರವರು ಸತತ ಪರಿಶ್ರಮ ಮಾತ್ರ ಗೆಲುವು ಸಾಧ್ಯ. ಸೋಲುಗಳು ನಮ್ಮನ್ನು ಪರೀಕ್ಷಿಸುತ್ತವೆ. ನಾವು ಎದೆಗುಂದದೆ ಮತ್ತಷ್ಟು ಪ್ರಯತ್ನ ಪಟ್ಟಾಗ ಗೆಲುವಿನ ದಾರಿ ನಮ್ಮದಾಗುತ್ತದೆ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ತ್ರಿಶಾ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ಅವರು ವಹಿಸಿದ್ದರು.
ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು ಅಕ್ಷತಾ ಸ್ವಾಗತಿಸಿ, ಶ್ರೀನಿಧಿ ನಿರೂಪಿಸಿದರು. ವೇದಿಕೆಯಲ್ಲಿ ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರು ಡಾ. ಅನಂತ್ ಪೈ, ಸಿದ್ಧಾಂತ್ ಫೌಂಡೇಶನ್ ಟ್ರಸ್ಟಿ ನಮಿತಾ ಜಿ ಭಟ್ ಉಪಸ್ಥಿತರಿದ್ದರು.