ಕನ್ನಡದ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈದರಾಬಾದ್‌ನಲ್ಲಿ ಸೂಸೈಡ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಶೋಭಿತಾ ಶಿವಣ್ಣ ಅವರು ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರದವರು ಜೀ ಕನ್ನಡದ ‘ಬ್ರಹ್ಮಗಂಟು’ ಧಾರಾವಾಹಿಯಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಾಕಷ್ಟು ಅಭಿಮಾನಿಗಳಿಗೆ ಹತ್ತಿರವಾಗಿದ್ದರು.
ಶೋಭಿತಾ ಶಿವಣ್ಣ ಕಳೆದ ವರ್ಷ ಮದುವೆ ಮಾಡಿಕೊಂಡಿದ್ದು, ಕಿರುತೆರೆಯಿಂದ ದೂರವಾಗಿ ಹೈದರಾಬಾದ್ ನಲ್ಲಿ ವಾಸವಾಗಿದ್ದರು. ಆದರೆ, ಮಧ್ಯರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ನಟಿ ಒಂದ್ ಕಥೆ ಹೇಳ್ಲಾ, ಜಾಕ್ ಪಾಟ್, ಎರಡೊಂದ್ಲಾ ಮೂರು, ಎಟಿಎಮ್, ವಂದನಾ, ಅಪಾರ್ಟ್‌ಮಂಟ್ ಟು ಮರ್ಡರ್ ಸಿನಿಮಾದಲ್ಲಿ ನಟಿಸಿದ್ದರು.
ಕನ್ನಡದ 12ಕ್ಕೂ ಹೆಚ್ಚು ಸೀರಿಯಲ್ ಗಳಲ್ಲಿ ಕೆಲಸ ಮಾಡಿದ್ದರು. ಬ್ರಹ್ಮಗಂಟು, ಕೃಷ್ಣ ರುಕ್ಮಿಣಿ, ಗಾಳಿಪಟ, ಕೋಗಿಲೆ, ದೀಪವು ನಿನ್ನದೆ ಗಾಳಿಯು ನಿನ್ನದೆ, ಅಮ್ಮಾವ್ರು, ಮನೆದೇವರು ಮತ್ತು ಮಂಗಳಗೌರಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಆ್ಯಕ್ಟ್ ಮಾಡಿದ್ದರು.