ದೇವನಹಳ್ಳಿ: ಡಾ.ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ಕರೆಂಟ್ ಶಾಕ್ನಿಂದ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ನಡೆದಿದೆ.
ಸಾಯಿಭವನ್ (13) ಮೃತ ದುರ್ದೈವಿ. ಹೊಸಕೋಟೆ ತಾಲೂಕಿನ ಸೂಲಿಬೆಲೆ ನಿವಾಸಿ ಸಾಯಿಭವನ್ ಕಳೆದ ಎರಡು ವರ್ಷಗಳಿಂದ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಹಾಸ್ಟೆಲ್ನಲ್ಲಿದ್ದ ಸಾಯಿಭವನ್ ಭಾನುವಾರ ಬೆಳಗ್ಗೆ ಬಟ್ಟೆ ಒಣ ಹಾಕಲು ಹೋಗಿದ್ದಾನೆ. ಈ ವೇಳೆ ವಸತಿ ನಿಲಯದ ಮೇಲಿನ 11KV ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.