ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅವಹೇಳನ ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರ ಅವಹೇಳನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.
ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದ ಆಸ್ಕರ್ ಫರ್ನಾಂಡಿಸ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯಿತು.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡರು ಅಸಂವಿಧಾನಿಕ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ರಾಹುಲ್ ಗಾಂಧಿ ಒಬ್ಬ ಪ್ರಬುದ್ಧ ನಾಯಕರಾಗಿ ರೂಪುಗೊಂಡಿದ್ದಾರೆ, ಇದನ್ನು ಸಹಿಸಲು ಬಿಜೆಪಿಯವರಿಗೆ ಆಗುತ್ತಿಲ್ಲ. ಅವಹೇಳನ ಮಾಡುವುದರ ಜೊತೆಗೆ ಸುಳ್ಳು ದೂರುಗಳನ್ನು ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ದೂರಿದರು. ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಸೇರಿ ಪಾದಯಾತ್ರೆ ಮೂಲಕ ಬ್ರಹ್ಮಗಿರಿ ಸರ್ಕಲ್ ಗೆ ತೆರಳಿ ಬೃಹತ್ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಎಲ್ಲಾ ಪ್ರಮುಖ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.