ಕಾಪು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಖಾಸಗಿ ಬಸ್: ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಕಾಪುವಿನ ಉಳಿಯಾರಗೋಳಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಉಡುಪಿ – ಶಿರ್ವ ನಡುವೆ ಸಂಚರಿಸುತ್ತಿದ್ದ ಮಿಲಾನ್ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಸರಿದು ನಿಂತಿದೆ. ತಕ್ಷಣವೇ ಸ್ಥಳೀಯರು ಕಾರ್ಯಾಚರಣೆ ನಡೆಸಿ, ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಮುಂಭಾಗಕ್ಕೆ ಹಾನಿಯಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಬಂದು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.