ಕಾಪು: ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ.

ಕಾಪು: ವಿವಾಹಿತ ಮಹಿಳೆಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಚುಕ್ಕು ತೋಟ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.

ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ತಂದೆಯ ನಿಧನ ನಂತರ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ. ಇವರಿಗೆ 7 ವರ್ಷ ಹಾಗೂ 1 ವರ್ಷ 9 ತಿಂಗಳ ಮಗುವಿದೆ. ಪತಿಯ ಮನೆಯಲ್ಲಿದ್ದ ಇವರು, ಇಂದು ಮುಂಜಾನೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯ ಸಹಾಯದಿಂದ ಮಹಿಳೆಯ ವೃತ್ತ ದೇಹವನ್ನು ಮೇಲೆತ್ತಲಾಯಿತು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.