ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಾ. 1 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪುವಿನಲ್ಲಿ ಕಾಪುವಿನ ಅಮ್ಮನ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಾ. 1ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ರಾತ್ರಿ 8 ಗಂಟೆಯಿಂದ ನಡೆಯಲಿದೆ.

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 300 ವಿದ್ಯಾರ್ಥಿಗಳಿಂದ 3 ಗಂಟೆಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ನೃತ್ಯ – ಭೋ ಶಂಭೋ, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಬಡಗುತಿಟ್ಟು ಯಕ್ಷಗಾನ-ಶ್ರೀರಾಮ ಪಟ್ಟಾಭಿಶೇಕ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ-ನವದುರ್ಗೆಯರು, ಮಲ್ಲಕಂಬ ಹಾಗೂ ರೋಪ್ ಕಸರತ್ತು, ಡೊಳ್ಳು ಕುಣಿತ, ಸೃಜನಾತ್ಮಕ ನೃತ್ಯ, ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ಕಥಕ್‌ನೃತ್ಯ-ವರ್ಷಧಾರೆ ಪುರುಲಿಯಾ, ತೆಂಕುತಿಟ್ಟು ಯಕ್ಷಗಾನ-ಅಗ್ರಪೂಜೆ ಮೊದಲಾದ ವೈಭವ ಜನರನ್ನು ಸೆಳೆಯಲಿದೆ.