ಕಾರ್ಕಳ: ಅಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು.

ಕಾರ್ಕಳ: ಕಾರ್ಕಳ ಶ್ರೀದೇವಿ ಕಾಲೋನಿ ಹತ್ತಿರ ಅಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕುಕ್ಕುಂದೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪದ ನಿವಾಸಿ ಶಂಕರ (50) ಎಂದು ಗುರುತಿಸಲಾಗಿದೆ.
ಕೃಷಿ ಕೆಲಸ ಮಾಡಿಕೊಂಡಿದ್ದ ಇವರು, ಜೂ.19ರಂದು ಲೋಹಿತ್ ಎಂಬವರ ಮನೆಯ ಬಳಿಯ ತೆಂಗಿನ ಮರದಿಂದ ತೆಂಗಿನಕಾಯಿ ತೆಗೆಯುತ್ತಿರುವಾಗ ಆಕಸ್ಮಿಕವಾಗಿ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಜೂ.21ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.