ಕಾರ್ಕಳ: ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದೆ.
ಇವತ್ತು ಮೂರನೇ ಆರೋಪಿ ಅಭಯ್(23) ಕಾರ್ಕಳ ಇವನನ್ನು ಬಂಧಿಸಲಾಗಿದೆ. ಅಭಯ್ ಇತನೇ ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ನಮಗೆ ಪ್ರಥಮವಾಗಿ ತನಿಖೆಯಲ್ಲಿ ಕಂಡುಬಂದಿರುತ್ತದೆ. ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ. ಈಗ ಆತನನ್ನು ಬಂಧಿಸಿ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.
ಇದೇ ರೀತಿಯಲ್ಲಿ NDPS ಪ್ರಕರಣದಲ್ಲಿ ಅಭಯ್ ನನ್ನು ಬಂಧಿಸಲಾಗಿದೆ ಅಲ್ಲದೆ ಇನ್ನು ಎರಡು ಸಂಶಯಿತ ವ್ಯಕ್ತಿಗಳನ್ನು ವಶಪಡಿಸಿಕೊಂಡಿರುತ್ತೇವೆ. ಅವರುಗಳನ್ನು ತನಿಖೆ ನಡೆಸಿ ಅವರುಗಳ ಪಾತ್ರದ ಬಗ್ಗೆ ತನಿಖೆ ನಡೆಸಿ, ಆದಷ್ಟು ಬೇಗನೆ ಪ್ರಕರಣವನ್ನು ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಉಡುಪಿ ಎಸ್ಪಿ ಮಾಹಿತಿ ನೀಡಿದ್ದಾರೆ.












