ಉಡುಪಿ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಜೋಡುರಸ್ತೆ ನಿವಾಸಿ ಅಲ್ತಾಫ್ ಬಂಧಿತ ಆರೋಪಿ. ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವತಿಯನ್ನು ಪುಸಲಾಯಿಸಿ ಕರೆದೊಯ್ದ ಆರೋಪಿ, ಆಕೆಗೆ ಅಮಲು ಪದಾರ್ಥ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಲಾಗಿದೆ. ತೀವ್ರ ಅಸ್ವಸ್ಥಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ