ಕಾರ್ಕಳ: ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ನಲ್ಲಿ ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ನಡೆದಿದೆ.
ನಿಟ್ಟೆ ಗ್ರಾಮದ ದೂಪದಕಟ್ಟೆ ಮರಿಪರಪುವಿನಿಂದ ಕಲ್ಲು ಲೋಡ್ ಮಾಡಿ ಮಂಗಳೂರು ಹೊರಡುವಾಗ ಲಾರಿ ನಿಯಂತ್ರಣ ತಪ್ಪಿ ಹೊಂಡಕ್ಕುರುಳಿದೆ. ಈ ಪರಿಣಾಮ ಕೊಪ್ಪಳ ಜಿಲ್ಲೆ ಎಲಬುರ್ಗಿ ದೇವಾಳಪುರದ ಕರಿಯಪ್ಪ (22) ಮತ್ತು ನರಿಯಪ್ಪ (27) ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.