ಕಾರ್ಕಳ: ಕಾಂಗ್ರೆಸ್ ಪಕ್ಷದ ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ವಿರುದ್ಧ ವಾಟ್ಸಾಪ್ ಸ್ಟೇಟಸ್ ಹಾಕಿ,ಅದರ ಕುರಿತು ಪ್ರಶ್ನಿಸಿದ್ದಕ್ಕೆ ತಮ್ಮ ಮೇಲೆ ಹಲ್ಲೆ ಯನ್ನೂ ನಡೆಸಿ, ಜೀವಬೆದರಿಕೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ದೀಕ್ಷಿತ್ ಶೆಟ್ಟಿ ಎಂಬುವವರು ಕಾರ್ಕಳ ಪೊಲೀಸ್ ಠಾಣೆಯಲ್ಲಿ ನಿತ್ಯಾನಂದ ಕುಲಾಲ್ ಅವರ ವಿರುದ್ದ ದೂರು ನೀಡಿದ್ದಾರೆ.
ನಿತ್ಯಾನಂದ ಕುಲಾಲ್ ಮುನಿಯಾಲು ಉದಯ ಕುಮಾರ್ ಶೆಟ್ಟಿ ವಿರುದ್ದ ಅಸಭ್ಯವಾಗಿ ಮೇಸೆಜ್ ಗಳನ್ನು ರವಾನೆ ಮಾಡುತ್ತಿದ್ದು. ಈ ಬಗ್ಗೆ ತಾನು ಪ್ರಶ್ನಿಸಿದಾಗ ನಿತ್ಯಾನಂದ ಕುಲಾಲ್ ತನಗೆ ದಮ್ಕಿ ಹಾಕಿ, ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದಿಕ್ಷೀತ್ ಶೆಟ್ಟಿ ದೂರು ನೀಡಿದ್ದಾರೆ.
ಗಾಯಾಳುವಾದ ದೀಕ್ಷಿತ್ ಶೆಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

















