ಕಾರ್ಕಳ: ಕಾರು ಡಿಕ್ಕಿ, ಬೈಕ್ ಸವಾರ ಸಾವು

ಕಾರ್ಕಳ: ಅತಿ ವೇಗದಿಂದ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದ ಜೋಡು ರಸ್ತೆ ಬಳಿ ಗುರುವಾರ ಸಂಭವಿಸಿದೆ. ಬಂಗ್ಲೆಗುಡ್ಡೆ ಕಡೆಯಿಂದ ಜೋಡು ರಸ್ತೆಯ ಕಡೆಗೆ ಸಂಚರಿಸುತ್ತಿದ್ದ ಬೈಕ್ ಸವಾರ ಮುದ್ದು (84) ಎಂಬವರಿಗೆ ಜೋಡು ರಸ್ತೆ ಕಡೆಯಿಂದ ಬಂಗ್ಲೆಗುಡ್ಡೆ ಕಡೆಗೆ ಅತಿ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಹೆಲ್ಮೆಟ್ ಕಳಚಿ ರೋಡಿಗೆ ಬಿದ್ದಿದ್ದು ತಲೆಗೆ ತೀವ್ರವಾದ ಗಾಯವಾಗಿದ್ದು, ಕಾರ್ಕಳ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.