ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 12 ಆಗಸ್ಟ್ 2024 ರಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ‘ನಶಾಮುಕ್ತ ಭಾರತ ಅಭಿಯಾನ’ 5ನೇ ವರ್ಷದ ಆಚರಣೆಯ ಪ್ರಯುಕ್ತವಾಗಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮಾದಕ ವ್ಯಸನವು ವ್ಯಸನಿ, ವ್ಯಕ್ತಿ, ಕುಟುಂಬ ಮತ್ತು ಸಮಾಜದ ಮೇಲೆ ಯಾವ ರೀತಿಯ ವಿನಾಶಕಾರಿ ಪರಿಣಾಮ ಬೀರಿದೆ ಎಂಬ ಅಂಶಗಳನ್ನು ತಿಳಿಸಿ, ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಹಿಂದಿ ಭಾಷಾ ವಿಭಾಗ ಮುಖ್ಯಸ್ಥರಾದ ಶ್ರೀಯುತ ವಿನಾಯಕ ಜೋಗ್ ರವರು ಪ್ರತಿಜ್ಞಾವಿಧಿ ಬೋಧಿಸಿದರು.