ಉಡುಪಿ : ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿ ಲಾಕರ್ ನಲ್ಲಿರಿಸಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಾಳ ನಿವಾಸಿ ಸಂತೋಷ್, ಟಿ(32) ಬಂಧಿತ ಆರೋಪಿ. ಈತ ಸುಮಾರು 33 ಪವನ್ ತೂಕದ 10,05,000 ರೂ. ಅಂದಾಜು ಮೌಲ್ಯದ ವಿವಿಧ ರೀತಿಯ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಂಧಿತ ಆರೋಪಿಯಿಂದ ಕಳವು ಮಾಡಿದ 33 ಪವನ್ ತೂಕದ 10,05,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ
 
								 
															





 
															 
															 
															











