ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಮೀನು ತುಂಬಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪುಕ್ಕೇರಿ ಬೈಪಾಸ್‌ನಲ್ಲಿ ಸಂಭವಿಸಿದೆ.
ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಮಲ್ಪೆಯಿಂದ ಮೀನು ಸಾಗಿಸುತ್ತಿದ್ದ ಲಾರಿ ಕಾರ್ಕಳ ಮತ್ತು ಮೂಡುಬಿದಿರೆಯ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.ಕಾರ್ಕಳ ಪಟ್ಟಣ ಪೊಲೀಸರು ಸ್ಥಳಕ್ಕೆ ಧಾವಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.












