ಮಣಿಪಾಲ: ಜಿಲ್ಲಾಧಿಕಾರಿ ಕಚೇರಿಯ ಬಳಿ ಇತ್ತೀಚೆಗೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನವೀನ್ ಎಂಬವರು ಕಾರ್ಕಳ ವೃತ್ತ ನಿರೀಕ್ಷಕರಾದ ಮಂಜಪ್ಪ ಡಿ.ಆರ್.ಅವರಿಗೆ ಅವಾಚ್ಯವಾಗಿ ನಿಂದಿಸಿದ ಕಾರಣಕ್ಕೆ ಅವರ ಮೇಲೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಆ.5ರಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಪ್ರತಿಭಟನ ವೃತ್ತದಲ್ಲಿ ಪರಶುರಾಮ ಥೀಮ್ ಪಾರ್ಕ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ನವೀನ್ ಅವರು ಮಂಜಪ್ಪ ಅವರಿಗೆ ಏಕವಚನದಲ್ಲಿ ನಿಂದಿಸಿ, ಅವಮಾನ ಮಾಡಿ ಅವರ ಮನಸ್ಸಿಗೆ ಘಾಸಿಯಾಗುವ ರೀತಿಯಲ್ಲಿ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪ್ರಕರಣ ದಾಖಲಾಗಿದೆ.