ಕಾರ್ಕಳ: ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಮಜಲಕೋಡಿ ಎಂಬಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬಳ್ಲಾರಿ ಜಿಲ್ಲೆಯ ಸಂಡೂರು ತಾಲೂಕು ನುಡುಗುರ್ತಿ ನಾಯಕರ ಬೀದಿಯ ನಿವಾಸಿ ಸಿದ್ದಪ್ಪ (37) ಎಂಬ ವ್ಯಕ್ತಿಯು ಮೇ.14 ರಂದು ಊರಿಗೆ ಹೋಗುವುದಾಗಿ ಹೇಳಿ ಹೋದವರು ಊರಿಗೂ ಹೋಗದೇ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.