ಕಾರ್ಕಳ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆ

ಉಡುಪಿ, ಅ.27: ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶುಭದ ರಾವ್ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಗೋಪಿನಾಥ್ ಭಟ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶವನ್ನು ನೀಡಿದ್ದಾರೆ.

ಕಾರ್ಕಳ ಬ್ಲಾಕ್ ಅಧ್ಯಕ್ಷರಾಗಿದ್ದ ಸದಾಶಿವ ದೇವಾಡಿಗ ಹಾಗೂ ಹೆಬ್ರಿ ಬ್ಲಾಕ್ ಅಧ್ಯಕ್ಷರಾಗಿ ಚಂದ್ರಶೇಖರ್ ಬಾಯರಿ ಅವರ ಅಧ್ಯಕ್ಷ ಅವಧಿಯು ಪೂರ್ಣ ಗೊಂಡ ಹಿನ್ನಲೆಯಲ್ಲಿ ಈ ಸಮಿತಿಗಳಿಗೆ ನೂತನ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.