ಕಾಸರಗೋಡು: ಬೇಡಡ್ಕ ಠಾಣಾ ವ್ಯಾಪ್ತಿಯ ಬಂದಡ್ಕ ಪಡುಪ್ಪುನಲ್ಲಿ ಹಿಟಾಚಿ ಯಂತ್ರ ಮಗುಚಿ ಬಿದ್ದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಇಂದು (ಜೂ.25) ಬೆಳಿಗ್ಗೆ ನಡೆದಿದೆ.
ಮೃತಪಟ್ಟ ಯುವಕನನ್ನು ಬಂದಡ್ಕದ ಪ್ರೀತಂ ಲಾಲ್ ಚಂದ್ (22) ಎಂದು ಗುರುತಿಸಲಾಗಿದೆ.
ಈತ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಮಿನಿ ಚಂದ್ರನ್ ರವರ ಪುತ್ರ ಅವರಿಗೆ ಸೇರಿದ ಜೆಸಿಬಿ ಯಂತ್ರ ತೊಳೆಯುತ್ತಿದ್ದಾಗ ಈ ದುರಂತ ಸಂಭವಿಸಿದೆಬಂದಡ್ಕ ಪಡುಪ್ಪುನಲ್ಲಿರುವ ಸಂಬಂಧಿಕರ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯಂಗಳದಲ್ಲಿ ನಿಲ್ಲಿಸಿದ್ದ ಹಿಟಾಚಿ ತೊಳೆಯುತ್ತಿದ್ದಾಗ ಮಗುಚಿ ಬಿದ್ದಿದ್ದು, ಅದರಡಿ ಸಿಲುಕಿದ್ದ ಪ್ರೀತಂ ಲಾಲ್ ಚಂದ್ ಅವರನ್ನು ತಕ್ಷಣ ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಇವರ ಸಹೋದರ ಗೌತಮ್ ಲಾಲ್ ರವರ ಜೆಸಿಬಿ ಯಂತ್ರದಲ್ಲಿ ಸಹಾಯಕರಾಗಿಕೆಲಸ ನಿರ್ವಹಿಸುತ್ತಿದ್ದರು. ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ