ಕಿನ್ನಿಗೋಳಿ:ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ;ಅಪಾಯದಿಂದ ಪಾರಾದ ತಾಯಿ ಮಕ್ಕಳು

ಕಿನ್ನಿಗೋಳಿ: ಕಾರೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆ ‌ಮುಂಭಾಗ ಸೋಮವಾರ (ಅ.07) ನಡೆದಿದೆ.

ಕಿನ್ನಿಗೋಳಿ ಸಮೀಪದ ದಾಮಸ್‌ ಕಟ್ಟೆ ನಿವಾಸಿ ಜಾಸ್ಮಿನ್ ಅವರು ಮತ್ತೋರ್ವ ಮಹಿಳೆ ‌ಮತ್ತು ಎರಡು ‌ಮಕ್ಕಳೊಂದಿಗೆ ಕಿನ್ನಿಗೋಳಿ‌ ಮಾರುಕಟ್ಟೆ ಮುಂಭಾಗ ಕಾರು ನಿಲ್ಲಿಸಿ ಹೋದ ಸಂದರ್ಭ ಕಾರಿನಲ್ಲಿ ಹೊಗೆ ಬರಲಾರಂಭಿಸಿದೆ. ಕಾರಿನಲ್ಲಿದ್ದ ಮಹಿಳೆ ಮತ್ತು ಎರಡು ಮಕ್ಕಳು ಬೊಬ್ಬೆ ಹಾಕಿದ್ದು, ಕೂಡಲೇ ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ಅಪಾಯದಿಂದ ಪಾರು‌ ಮಾಡಿದ್ದಾರೆ.

ಸ್ಥಳೀಯ ಅಂಗಡಿ ‌ಮಾಲಿಕ ರಾಘವೇಂದ್ರ ಪ್ರಭು ಸ್ಥಳೀಯ ಪೆಟ್ರೋಲ್ ಪಂಪ್ ನಿಂದ ಅಗ್ನಿ ಶಮನ ಸಾಧನದ ಮೂಲಕ, ಸ್ಥಳೀಯರೊಂದಿಗೆ ಸೇರಿ ಬೆಂಕಿಯನ್ನು ನಂದಿಸಿದ್ದಾರೆ.