ಕುಂದಗನ್ನಡ ಹಾಡುಗಾರಿಕೆಯಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ

ಕುಂದಾಪುರ: ರೇಡಿಯೋ ಕುಂದಾಪುರ 89.6 ಎಫ್. ಎಂ. ಮತ್ತು “ಕುಂದಪ್ರಭ” ಆಶ್ರಯದಲ್ಲಿ ನಡೆದ ಕುಂದಗನ್ನಡ ಹಾಡುಗಾರಿಕೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರಥಮ ಸ್ಥಾನ ಪಡೆದು ಸಾಧನೆ ಮೆರೆದಿದ್ದಾಳೆ.

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.