ಕುಂದಾಪುರ : ಸೆಪ್ಟೆಂಬರ್ 28 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರತೀಕ್ ಕುಂದರ್, ಸ್ಕಂದ, ಕೆ. ಶ್ರೀನಿತಾ ಎಸ್. ಕಾಮತ್, ವನಿಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.