ಕುಂದಾಪುರ: ಈಚರ್ ಲಾರಿಗೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು.

ಉಡುಪಿ: ಈಚರ್ ಲಾರಿಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹೈಕಾಡಿಯಲ್ಲಿ ನಡೆದಿದೆ.
ಮೃತ ಸವಾರನನ್ನು ಬೆಳ್ವೆ ನಿವಾಸಿ ನಾಗರಾಜ್ (40) ಎಂದು ಗುರುತಿಸಲಾಗಿದೆ. ಅವರು ಬೆಳ್ವೆಯಿಂದ ಕುಂದಾಪುರದ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.‌ ಈಚರ್ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ನಾಗರಾಜ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.