ಕುಂದಾಪುರ: ಇಲ್ಲಿನ ಕೋಟೇಶ್ವರ ಫ್ರೀತಮ್ ಬಾರ್ ಸಮೀಪ ಕೋಟೇಶ್ವರ -ಹಾಲಾಡಿ ರಸ್ತೆಯಲ್ಲಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಗುಲ್ವಾಡಿ ಗ್ರಾಮದ ಶಶಿಧರ (56) ಎಂದು ಗುರುತಿಸಲಾಗಿದೆ.
ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟಲು ನಿಂತಿದ್ದ ಶಶಿಧರ್ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಗಾಯಗೊಂಡ ಅವರು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.