ಕುಂದಾಪುರ: ಕಾರು- ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ; ಇಬ್ಬರು ಮೃತ್ಯು

ಉಡುಪಿ: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಮೃತರನ್ನು ದ್ವಿಚಕ್ರ ವಾಹನ ಸವಾರರಾದ ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ.

ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು, ಇದರ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Oplus_131072

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಹಾಗೂ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಹಾಗೂ ಹೈವೇ ಪಟ್ರೋಲ್ ಸಿಬ್ಬಂದಿ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Oplus_131072