ಕುಂದಾಪುರ: ತಾಲೂಕಿನ ಜಪ್ತಿ ಗ್ರಾಮದ ಆನಂದ ಕುಲಾಲ್ ಅವರ ಪುತ್ರ ಕೃಷ್ಣರಾಜ (31) ಸೆ. 18ರಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಕಾಂ ಮುಗಿಸಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅವರು 6 ತಿಂಗಳಿನಿಂದ ಕೆಲಸವಿಲ್ಲದೇ ಊರಿನಲ್ಲಿ ನೆಲೆಸಿದ್ದರು. 3 ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದು, ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.
ತಾಯಿ ಬೇಬಿ ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.