ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನ ಹೊಸ ನಿಯಮ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು

ಉಡುಪಿ: ಪಠ್ಯೇತರ ಚಟುವಟಿಕೆಗಳಿಗೆ ಕಾಲೇಜಿನಿಂದ ಯಾವುದೇ ಪ್ರೋತ್ಸಾಹವಿಲ್ಲ ಎಂದು ಆರೋಪಿಸಿ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ನೇತೃತ್ವದಲ್ಲಿ ಇಂದು ಕಾಲೇಜು ಗೇಟ್ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.

ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ವಿದ್ಯಾರ್ಥಿಗಳು ಕಾಲೇಜು‌ ಆಡಳಿತ ಮಂಡಳಿಯ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೊಸ ನಿಯಮ ವಿರುದ್ಧ ಘೋಷಣೆ ಕೂಗಿ, ಹಳೆಯ ನಿಯಮದಲ್ಲೆ ಮುಂದುರಿಯುವಂತೆ ಒತ್ತಾಯ ಮಾಡಿದರು.

ವಿದ್ಯಾರ್ಥಿಗಳೇ ಹಣ ಸಂಗ್ರಹಿಸಿ ಕಾರ್ಯಕ್ರಮ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೊಸ ನಿಯಮದ ಅಳವಡಿಕೆ ಬಳಿಕ ಗ್ರಾಮೀಣ ಪರಿಸದ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಕಾಲೇಜು ಆಡಳಿತ ಮಂಡಳಿ ಏಕಾಏಕಿ ನಿಯಮ ಬದಲಾಯಿಸಿದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯ ಕೊನೆಯಲ್ಲಿ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿ ಹಿಂದಿನ ಸ್ಥಿತಿ ಕಾಪಾಡುವಂತೆ ಮನವಿ ಮಾಡಿದರು.