ಕುಂದಾಪುರ: ಮದ್ಯ ಮಾರಾಟ ನಿಷೇಧ

ಉಡುಪಿ: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ನವೆಂಬರ್ 26 ರಿಂದ 28 ರ ವರೆಗೆ ನಡೆಯಲಿರುವ ಹಿನ್ನೆಲೆ, ರಥೋತ್ಸವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ, ಕುಂದಾಪುರ ತಾಲೂಕಿನ ಕೋಟೇಶ್ವರ, ಹಂಗಳೂರು ಹಾಗೂ ಗೋಪಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನವೆಂಬರ್ 27 ರ ಬೆಳಗ್ಗೆ 6 ರಿಂದ ನವೆಂಬರ್ 28 ರ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣ ದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.