ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ವಿದ್ಯೋದಯ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸೆ. 13 ರಂದು ಆಯೋಜಿಸಿದ ಪದವಿಪೂರ್ವ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು. ಮೂವರು ವಿದ್ಯಾರ್ಥಿಗಳು ನಿರೀಕ್ಷಾ, ತನ್ವಿತಾ ಹಾಗೂ ಪ್ರಜ್ಞಾ ಜಿಲ್ಲಾ ಮಟ್ಟದಲ್ಲಿ ಪ್ರಥಯ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.