ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳ ಲೋಗೋ ರಚನೆ ಸ್ಪರ್ಧೆ.

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ Biz – Rangoli- 2024 ರ ಶೀರ್ಷಿಕೆಯಡಿಯಲ್ಲಿ ಜು.೪ ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳ ಲೋಗೋ ಗಳನ್ನು ರಂಗೋಲಿಯ ಮೂಲಕ ಪ್ರಸ್ತುತ ಪಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. 45 ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸುವುದರ ಮೂಲಕ ವಿವಿಧ ಕಂಪನಿಗಳ ಲೋಗೋವನ್ನು ಪ್ರಸ್ತುತ ಪಡಿಸಿದರು.

ತೀರ್ಪುಗಾರರಾಗಿ ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ಭಟ್ , ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಕ್ರಾಪ್ಟ್ ಶಿಕ್ಷಕಿ ವೀಣಾ ಭಾಗವಹಿಸಿದ್ದರು.