ಕುಂದಾಪುರ: ಹಾವು ಕಡಿತ; ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತ್ಯು.

ಕುಂದಾಪುರ: ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ವ್ಯಕ್ತಿ ಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಶಂಕರನಾರಾಯಣ ಗ್ರಾಮದ ಶಿವರಾಮ(68) ಎಂದು ಗುರುತಿಸಲಾಗಿದೆ.

ಇವರು ಸೆ.27ರಂದು ಶಂಕರನಾ ರಾಯಣ ಗ್ರಾಮದ ತೌಡ ಕಲ್ಲು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ವಿಷದ ಹಾವು ಕಚ್ಚಿದ್ದು, ತೀವ್ರವಾಗಿ ಅಸ್ವಸ್ಥ ಗೊಂಡಿದ್ದ ಅವರು ಅ.8ರಂದು ಚಿಕಿತ್ಸೆ ಫಲಕಾರಿಯಾಗದೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.