ಕುಡಿಯುವ ನೀರು ನೈರ್ಮಲ್ಯ ಮಾಹಿತಿ ಶಿಬಿರ ಮತ್ತು ವಸ್ತುಪ್ರದರ್ಶನ

ಉಡುಪಿ: ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ, ಸ್ಕೋಡ್‌ವೇಸ್ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಉಡುಪಿ ಜಿಲ್ಲೆಯ ಗ್ರಾಮೀಣ ಮತ್ತು ನಗರದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಕುಡಿಯುವ ನೀರು ಮತ್ತು ನೈರ್ಮಲ್ಯದ ಕುರಿತಾದ ಮಾಹಿತಿ ಮತ್ತು ಪ್ರಾತಿಕ್ಷಿಕೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ವಸ್ತು ಪ್ರದರ್ಶನವು ನವೆಂಬರ್ 27 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.