ಕೃತಕ ಬುದ್ಧಿಮತ್ತೆ ಕಲೆ ಮತ್ತು ಕಲಾವಿದರಿಗೆ ದೊಡ್ಡ ಸವಾಲು; ಡಾ.ಬಿ. ಭಾಸ್ಕರ ರಾವ್

ಉಡುಪಿ: ಕೃತಕ ಬುದ್ಧಿಮತ್ತೆ ಕಲೆ ಮತ್ತು ಕಲಾವಿದರಿಗೆ ದೊಡ್ಡ ಸವಾಲು ಆಗಿದೆ. ಆ ಸವಾಲನ್ನು ಸ್ವೀಕರಿಸಿ ಕಲಾವಿದರು ಹಾಗೂ ಕಲಾ ಸಂಸ್ಥೆಗಳು ಬೆಳೆಯಬೇಕು ಎಂದು ಲೇಖಕ ಡಾ.ಬಿ. ಭಾಸ್ಕರ ರಾವ್ ಹೇಳಿದರು.

ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪ್ರಜ್ಞಾನಂ ಟ್ರಸ್ಟ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ಭಾಷಾ ವಿಜ್ಞಾನಿ ನಾಡೋಜ ಪ್ರೊ.ಕೆ.ಪಿ.ರಾವ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಲಾಂಛನವನ್ನು ಅನಾವರಣಗೊಳಿಸಲಾಯಿತು.ಸಾಹಿತಿ ಸುಧಾ ಆಡುಕಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿದರು. ನಾಟಕ ನಿರ್ದೇಶಕ ಗಣೇಶ್ ರಾವ್ ಎಲ್ಲೂರು ಅವರನ್ನು ಸನ್ಮಾನಿಸಲಾಯಿತು.

ಜಿ.ಪಿ.ಪ್ರಭಾಕರ ತುಮರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಷಾ ಪೆರ್ಡೂರು ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದುಷಿ ಸಂಸ್ಕೃತಿ ಪ್ರಭಾಕರ್ ಅವರಿಂದ ಹೆಜ್ಜೆಗೊಲಿದ ಬೆಳಕು(ನಾಟ್ಯ ರಾಣಿ ಶಾಂತಲೆಯ ಆತ್ಮ ವೃತ್ತ) ಏಕವ್ಯಕ್ತಿ ನಾಟಕ ಪ್ರದರ್ಶನ ನಡೆಯಿತು.