ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಆಯ್ಕೆ.

ಕೆನಡಾದ ನೂತನ ಪ್ರಧಾನಿಯಾಗಿ ಶುಕ್ರವಾರ ಮಾಜಿ ಕೇಂದ್ರ ಬ್ಯಾಂಕರ್ ಮಾರ್ಕ್ ಕಾರ್ನಿ ಅವರು ಪ್ರಮಾಣವಚನ ಸ್ವೀಕರಿಸಿದರು.

ಮಾ.14 ರಂದು ಒಟ್ಟಾವಾದ ರೈಡೋ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಗವರ್ನರ್ ಜನರಲ್ ಮೇರಿ ಸೈಮನ್ ಅವರು ಕಾರ್ನಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಇದೇ ವೇಳೆ ಮಾರ್ಕ್ ಕಾರ್ನಿ ಅವರ ಸಂಪುಟ ಸದಸ್ಯರೂ ಪ್ರಮಾಣ ವಚನ ಸ್ವೀಕರಿಸಿದರು. ಲಿಬರಲ್ ಪಕ್ಷದಿಂದ ಸ್ಪರ್ಧಿಸಿದ್ದ ಕಾರ್ನಿ ಅವರು ಶೇ.86 ಮತಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ್ದರು.