ಗಣಪತಿ ಸಹಕಾರಿ ವ್ಯವಸಾಯಕ ಸಂಘ ನಿ. ಕೆಮ್ಮಣ್ಣು ಇದರ ಶತಮಾನೋತ್ಸವ ಸಂಭ್ರಮದಲ್ಲಿರುವ ʼಶತಭಿವಂದನಂʼ ಸಮಾರಂಭದ ಸಮಾರೋಪ ಅ. 27ರಂದು ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಶಾಸಕ ಕೆ. ರಘುಪತಿ ಭಟ್ ಸಹಕಾರಿ ಸಂಘದ ಕಾರ್ಯ ವೈಖರಿಯ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭ ಸರ್ವೋಚ್ಛ ನ್ಯಾಯಾಲಯ ಮಾಜಿ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಎನ್. ಸಂತೋಷ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.
ಡಾ.ಟಿ. ಎಂ. ಎ. ಪೈ ಫೌಂಡೇಶನ್ ಅಧ್ಯಕ್ಷ ತೋನ್ಸೆ ಅಶೋಕ್ ಪೈ, ಸಂತ ಥೆರೇಸಾ ಚರ್ಚ್ ಧರ್ಮಗುರು ರೆ |ಫಾ | ಫಿಲಿಪ್ ನೆರಿ ಅರಾನ್ಹ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಡಾ. ದೇವಿ ಪ್ರಸಾದ್ ಶೆಟ್ಟಿ ಬೆಳಪು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉದ್ಯಮಿಗಳಾದ ಪ್ರಸಾದ್ ರಾಜ್ ಕಾಂಚನ್, ಜನಾರ್ಧನ್ ತೋನ್ಸ್, ಸಂಸ್ಥೆಯ ಅಧ್ಯಕ್ಷ ಟಿ. ಸತೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.